ವಿರಾಜಪೇಟೆ ಡಿ.5 : ಗೋಣಿಕೊಪ್ಪಲು ಕಾವೇರಿ ವಿದ್ಯಾಸಂಸ್ಥೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಸಂಘ, ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಂದಿಗಳಿಗೆ ನಡೆದ ಪುತ್ತರಿ ಕಪ್ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡ ಸಾಧನೆ ಮಾಡಿದೆ.
ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡವು ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಹಾಗೂ ಕ್ರಿಕೆಟ್ ಹಾಗೂ ಥ್ರೋ ಬಾಲ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿತು.
ಈ ಸಂದರ್ಭ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಜರಿದ್ದರು.









