ಮಡಿಕೇರಿ ಡಿ.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.8 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ಡಿ.13 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*