ಮಡಿಕೇರಿ ಡಿ.6 : ಪ್ರಸಕ್ತ (2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ ಪ್ಲಿಪ್‍ಕಾರ್ಟ್, ಅರ್ಬನ್ ಕಂಪನಿ, ಓಲಾ, ಓಬರ್, ಸ್ವಿಗ್ಗಿ, ಜೊಮೆಟೋ, ಅಮೆಜಾನ್, ಗಿಗ್ ವರ್ಕರ್ ಗಳಲ್ಲಿ ಲಭ್ಯವಿರುವ ಉದ್ಯೋಗಗಳ ತರಬೇತಿ ಹಾಗೂ ಫ್ರೀ ಲ್ಯಾನ್ಸರ್(ಖಾಸಗಿ ಕ್ಷೇತ್ರ) ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ ಪ್ಲಿಪ್‍ಕಾರ್ಟ್, ಅರ್ಬನ್ ಕಂಪನಿ, ಓಲಾ, ಓಬರ್, ಸ್ವಿಗ್ಗಿ, ಜೊಮೆಟೋ, ಅಮೆಜಾನ್, ಗಿಗ್ ವರ್ಕರ್ ಗಳಲ್ಲಿ ಲಭ್ಯವಿರುವ ಉದ್ಯೋಗಗಳಿಗೆ ಹಾಗೂ ಫ್ರೀ ಲ್ಯಾನ್ಸರ್(ಖಾಸಗಿ ಕ್ಷೇತ್ರ)ಗಳಿಗೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ.
ಆಸಕ್ತ ಎಲ್ಲಾ ಪುರುಷ, ಮಹಿಳೆ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2 ದಿನ ಓರಿಯೇಂಟೇಷನ್ ತರಬೇತಿ, 18 ರಿಂದ 45 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.5 ಲಕ್ಷ ಮೀರಿರಬಾರದು. ಹೆಚ್ಚಿನ ಮಾಹಿತಿಗೆ ಮತ್ತು ಆನ್‍ಲೈನ್ ಅರ್ಜಿಯನ್ನು ಸಲ್ಲಿಸಲು www.sw.kar.nic.in ವೆಬ್‍ಸೈಟ್‍ನ್ನು ವಿಕ್ಷೀಸುವುದು. ತಾಂತ್ರಿಕ ಸಮಸ್ಯೆಗಳು ಕಂಡು ಬಂದರೆ ದೂರವಾಣಿ ಸಂಖ್ಯೆ 9482300400/ 9480843005/080-22207784 ನ್ನು ಸಂಪರ್ಕಿಸಬಹುದು.
ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು. ತರಬೇತಿ ಆಯೋಜಿಸುವ ಸ್ಥಳಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ತರಬೇತಿಯನ್ನು ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.













