ಮಡಿಕೇರಿ ಡಿ.6 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ನಡೆಯಿತು.
ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಗಣ್ಯರು ಉದ್ಘಾಟಿಸಿದರು.
ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್ ಅಂಬೆಕಲ್ಲು, ದಲಿತಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಹಾಜರಿದ್ದರು.
ಕಾರ್ಯಕ್ರಮದಲ್ಲಿ 12 ಮಂದಿ ನೇತ್ರದಾನ, 3 ಮಂದಿ ದೇಹದಾನಕ್ಕೆ ನೋಂದಾಯಿಸಿಕೊಂಡರು.