ಮಡಿಕೇರಿ ಡಿ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ‘ಮಹಾ ಪರಿನಿರ್ವಾಣ ದಿನ’ ಕಾರ್ಯಕ್ರಮವು ಬುಧವಾರ ನಡೆಯಿತು.
ನಗರದ ಗಾಂಧಿ ಭವನದಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗೌರವ ಸಲ್ಲಿಸಿ ಮಾತನಾಡಿ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು, ಜೊತೆಗೆ ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ, ಚಲನಶೀಲತೆ ಮತ್ತು ಕ್ರೀಯಾಶೀಲತೆ ಸ್ವಲ್ಪವನ್ನಾದರೂ ಅನುಸರಿಸಿದರೆ ಪ್ರತಿಯೊಬ್ಬರೂ ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಬರೆದಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಡೀ ವಿಶ್ವದ ಜ್ಞಾನಿಯಾಗಿದ್ದಾರೆ. ಆಕ್ಸ್‍ಪರ್ಡ್ ಹಾಗೂ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರ ಆರಂಭಿಸಿರುವುದು ಅವರ ವ್ಯಕ್ತಿತ್ವವನ್ನು ತಿಳಿಸುತ್ತದೆ. ಅಂತಹ ಮಹಾನ್ ಜ್ಞಾನಿಯ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಪದವಿ, ಸ್ನಾತಕೋತ್ತರ ಪದವಿ, ಡಿ.ಲಿಟ್, ಪಿಎಚ್‍ಡಿ ಹೀಗೆ ಹಲವು ಪದವಿ ಪಡೆದು ರಾಜಕೀಯ, ಸಾಮಾಜಿಕ, ಆರ್ಥಿಕ ಚಿಂತನೆಗಳ ಬಗ್ಗೆ ಅಧ್ಯಯನ ಮಾಡಿ ರಾಷ್ಟ್ರದ ಅಭಿವೃದ್ಧಿಗೆ ದಾಖಲಾಗಿವೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಅಂಬೇಡ್ಕರ್ ಅವರು ಒತ್ತಿ ಹೇಳಿದ್ದಾರೆ ಎಂದು ವೆಂಕಟ್ ರಾಜಾ ಅವರು ತಿಳಿಸಿದರು.
ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳು, ಭಾಷಣಗಳು ರಾಷ್ಟ್ರದ ಅಭಿವೃದ್ಧಿಗೆ ಸಾರ್ವಕಾಲಿಕ ದಾಖಲೆಗಳಾಗಿವೆ. ಅಂಬೇಡ್ಕರ್ ಅವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಶೋಷಿತ ಸಮಾಜಗಳು ಇತರರಂತೆ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್ ಅವರು ಶ್ರಮಿಸಿದ್ದಾರೆ ಎಂದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ಸಂವಿಧಾನ ರಚಿಸುವಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ಭಾರತದ ಎಲ್ಲಾ ವರ್ಗದ ಕಟ್ಟಕಡೆಯ ಜನರಿಗೂ ಸಂವಿಧಾನದ ಸೌಲಭ್ಯಗಳು ತಲುಪುವಲ್ಲಿ ಶ್ರಮಿಸಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಯ ಫಲವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣೀಭೂತರಾದರು. ತಮ್ಮ ಪ್ರಖರ ಓದು ಮತ್ತು ಅಧ್ಯಯನದಿಂದ ಸಮಾಜದ ಹಿತ ಮತ್ತು ಶೋಷಿತ ವರ್ಗದ ಧ್ವನಿಯಾಗಿ ಅಂಬೇಡ್ಕರ್ ದುಡಿದಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಜ್ಞಾನಿಯಾಗಿ ಹಾಗೂ ಭಾರತ ಭಾಗ್ಯವಿಧಾತರಾಗಿ ಸದಾ ಕಣ್ಣುಮುಂದೆ ಇದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಬದುಕಿ, ಅಭಿವೃದ್ಧಿ ಸಾಧಿಸಬೇಕು ಎಂಬ ಕನಸನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದರು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ, ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡಿದ್ದರು. ಮೂಕನಾಯಕ, ಬಹಿಷ್ಕøತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸ್ಮರಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಐಟಿಡಿಪಿ ಅಧಿಕಾರಿ ಎಸ್.ಹೊನ್ನೇಗೌಡ, ಜಿಲ್ಲಾ ಖಜಾನೆ ಅಧಿಕಾರಿ ಬಿ.ಎನ್.ರಘುನಾಥ್, ಪೌರಾಯುಕ್ತರಾದ ವಿಜಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತಹಶೀಲ್ದಾರ್ ಪ್ರವೀಣ್ ಕುಮಾರ್, ಶಿಕ್ಷಣಾಧಿಕಾರಿ ಮಹದೇವ ಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನಾರಾಯಣ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ದಿವಾಕರ, ಸಹಕಾರ ಇಲಾಖೆಯ ಉಪ ನಿಬಂಧಕರಾದ ಕೃಷ್ಣಪ್ರಸಾದ್ ಇತರರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*