ಮಡಿಕೇರಿ ಡಿ.6 : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೆಲವು ಇಲಾಖೆಗಳು ಭೌತಿಕ ಪ್ರಗತಿ ಸಾಧಿಸಿದ್ದು, ಆರ್ಥಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ಸೂಚಿಸಿದರು.
ವೈಯಕ್ತಿಕ ಫಲಾನುಭವಿಗಳು ಆಯ್ಕೆ ಮಾಡದಿದ್ದಲ್ಲಿ, ಕೂಡಲೇ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಬಡವರಿಗಾಗಿ ಮೀಸಲಿಡುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಇಲಾಖೆ ಕಾರ್ಯಕ್ರಮಗಳು ನಿಗದಿಯಂತೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಎನ್.ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ದಿವಾಕರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಕಾರ್ಮಿಕ ಅಧಿಕಾರಿ ಹರ್ಷವರ್ಧನ, ವಿಕಲಚೇತನರ ಅಧಿಕಾರಿ ವಿಮಲ, ಸಹಕಾರ ಇಲಾಖೆಯ ಉಪ ನಿಬಂಧಕರಾದ ಕೃಷ್ಣಪ್ರಸಾದ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಚಂದ್ರಕುಮಾರ್, ನಾಚಪ್ಪ, ಇತರರು ಇದ್ದರು.










