ಮಡಿಕೇರಿ ಡಿ.7 : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್‍ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್.ವೀಣಾ, ಜಿ.ಪಂ ಸಿಇಓ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ,ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಜೆ.ಆರ್.ಬಾಲಸುಬ್ರಮಣ್ಯಂ ಸೇರಿದಂತೆ ಮಾಜಿ ಸೈನಿಕರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ಗೌರವ ನಮನ ಸಲ್ಲಿಸಿದರು.
ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ, ಗೌರವ ವಂದನೆ ಸಲ್ಲಿಸಲಾಯಿತು.









