ಮಡಿಕೇರಿ ಡಿ.7 : ಹೆಚ್‍ಡಿಎಫ್‍ಸಿ ಬ್ಯಾಂಕ್‍ನ ಮಡಿಕೇರಿ ಶಾಖೆ ವತಿಯಿಂದ ಸಿಎಸ್‍ಆರ್ ಚಟುವಟಿಕೆಯ ಭಾಗವಾಗಿ ರಕ್ತದಾನ ಶಿಬಿರ ನಡೆಯಿತು.
ಬ್ಯಾಂಕ್‍ನ ಸಭಾಂಗಣದಲ್ಲಿ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಜೀವದ ಪ್ರಾಮುಖ್ಯತೆ ಮತ್ತು ರಕ್ತದ ಅವಶ್ಯಕತೆ ಬಗ್ಗೆ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿರುವ ವ್ಯಕ್ತಿಗೆ ತಿಳಿದಿರುತ್ತದೆ. ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಲು ರಕ್ತದಾನ ಅತ್ಯಂತ ಅವಶ್ಯಕವಾಗಿದ್ದು, ಅದನ್ನು ಅರ್ಥಮಾಡಿಕೊಂಡು ದಾನಿಗಳು ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.
ಬ್ಯಾಂಕ್‍ಗಳಲ್ಲಿ ಕೇವಲ ಹಣಕಾಸಿನ ವ್ಯವಹಾರಗಳೇ ನಡೆಯುತ್ತದೆ, ಆದರೆ ಹೆಚ್‍ಡಿಎಫ್‍ಸಿ ಬ್ಯಾಂಕ್ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ರಕ್ತದ ಅಗತ್ಯತೆಗಳನ್ನು ಅರಿತು ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು.
ಶಾಖಾ ವ್ಯವಸ್ಥಾಪಕ ಚಂಗಂಡ ಪಿ.ದೇವಪ್ಪ ಮಾತನಾಡಿ, ಸಿಎಸ್‍ಆರ್ ಚಟುವಟಿಕೆಯ ಭಾಗವಾಗಿ ಕಳೆದ 15 ವರ್ಷಗಳಿಂದ ರಕ್ತದಾನ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಹೆಚ್‍ಡಿಎಫ್‍ಸಿ ಬ್ಯಾಂಕ್‍ನ ವಿವಿಧ ಶಾಖೆಗಳಲ್ಲಿಯೂ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಬ್ಯಾಂಕ್ ಶಾಖೆಯ ಕಾರ್ಯನಿರ್ವಹಕ ನಾರಾಯಣ ರಾಜೇಂದ್ರ, ಪ್ರಮುಖರಾದ ಅನಿಲ್ ಪಟುವರಿ ಉಪಸ್ಥಿತರಿದ್ದರು. ಶಿಬಿರದಲ್ಲಿ 35ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.









