ಮಡಿಕೇರಿ ಡಿ.7 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಆದೇಶವನ್ನು ಜ.1 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಸಾರ್ವಜನಿಕರು ಬದಲಿ ರಸ್ತೆಯಾದ ನೇಗಳ್ಳಿ-ಕರ್ಕಳ್ಳಿ-ಕಾರೇಕೊಪ್ಪ-ಕೂಡಿಗೆ ರಸ್ತೆ ಮಾರ್ಗವನ್ನು ಬಳಸುವುದು. ಈ ಬಗ್ಗೆ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.









