ಕಡಂಗ ಡಿ.7 : ಕರಡ ಫ್ರೆಂಡ್ಸ್ ವತಿಯಿಂದ ನಡೆದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕಡಂಗ ಫ್ರೆಂಡ್ಸ್ ತಂಡ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಕರಡ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕಡಂಗ ಫ್ರೆಂಡ್ಸ್ ತಂಡ, ಕುಂಜಿಲ ತಂಡ ವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪಂದ್ಯಾವಳಿಗೆ ಪ್ರಾಥಮಿಕ ಶಾಲಾ ಶಿಕ್ಷಕಿ ದಮಯಂತಿ ಮತ್ತು ಐತಿಚಂಡ ಪ್ರಕಾಶ್ ಕಾರ್ಯಪ್ಪ ಚಾಲನೆ ನೀಡಿದರು. ಈ ಸಂದರ್ಭ ಪಾಂಡಂಡ ರಘುಪತಿ, ದರ್ಶನ್, ಅರ್ಜುನ್, ಸುಬ್ರಮಣಿ ಮತ್ತಿತರು ಗಣ್ಯರು ಹಾಜರಿದ್ದರು.
ವರದಿ : ನೌಫಲ್ ಕಡಂಗ









