Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭೀರ್ಯ ಕೊಡವ ಚಲನಚಿತ್ರಕ್ಕೆ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್” ಪ್ರಶಸ್ತಿಯ ಗರಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭೀರ್ಯ ಕೊಡವ ಚಲನಚಿತ್ರಕ್ಕೆ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್” ಪ್ರಶಸ್ತಿಯ ಗರಿ* 

ಡಿಸೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.8 :  2022ರಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ತೀತಿರ ಶರ್ಮಿಲಿ ಅಪ್ಪಚ್ಚು ನಿರ್ಮಾಣದ “ಭೀರ್ಯ” ಕೊಡವ ಚಲನಚಿತ್ರಕ್ಕೆ  ಪ್ರತಿಷ್ಠಿತ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್” ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ರಾಜಾಜಿನಗರದ ಒರಿಯನ್ ಮಹಲ್’ನ ಪಿ.ವಿ.ಆರ್ ಚಿತ್ರಮಂದಿರದಲ್ಲಿ ನಡೆದ  ಸಮಾರಂಭದಲ್ಲಿ “ಭೀರ್ಯ” ಕೊಡವ ಚಲನಚಿತ್ರದ ನಿರ್ಮಾಪಕಿ ತೀತಿರ ಶರ್ಮಿಲಿ ಅಪ್ಪಚ್ಚು, ಕಾಂತಾರ ಸಿನಿಮಾ ಖ್ಯಾತಿಯ ನಿರ್ದೇಶಕ ರಿಷಭ್ ಶೆಟ್ಟಿ ಅವರಿಂದ ಪ್ರಶಸ್ತಿಯನ್ನು ಪಡೆದುಕೊಂಡರು.

ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಉದ್ಘಾಟನೆ ಮಾಡಿದ್ದರು. ಕಾಂತರ ಸಿನಿಮಾ ಖ್ಯಾತಿಯ ನಟ ನಿರ್ದೇಶಕ ರಿಷಭ್ ಶೆಟ್ಟಿ, ಶ್ರೀನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷ  ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ, ಹರ್ಷಿತಾ, ನಂದಿತಾ ಹಾಗೂ ಆಶೋಕ್, ಸುಂದರ್ ರಾಜ್, ವಸಿಷ್ಠ ಸಿಂಹ, ಶರಣ್, ಶಿವಕುಮಾರ್, ವಿನೋದ್ ರಾಜ್, ಭವ್ಯ, ಅನುಪ್ರಭಾಕರ್, ಪ್ರೇಮಾ, ವಿಜಯಲಕ್ಷ್ಮಿ, ಹರಿಪ್ರಿಯಾ, ವನಿತಾ ವಾಸು, ಹಿನ್ನೆಲೆ ಗಾಯಕರಾದ ಬಿ.ಕೆ ಸುಮಿತ್ರಾ, ಶಮಿತಾ ಮಲೆನಾಡ್, ಗುರುಕಿರಣ್, ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ಎಸ್.ಕೆ ಭಾರ್ಗವ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮಾಸ್ಟರ್ ಆನಂದ್ ಹಾಗೂ ಸಮೀರಾ ಜೋಡಿ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಸೇರಿದಂತೆ ಇತರರು ಮುತುವರ್ಜಿಯಿಂದ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್”  ನೂತನ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಕಳೆದ ಕೆಲ ತಿಂಗಳ ಹಿಂದೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಕನ್ನಡ ಸಿನಿಮಾಗಳೊಂದಿಗೆ ಪ್ರಾದೇಶಿಕ ಭಾಷೆಗಳಾದ ಕೊಡವ, ತುಳು, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಭಾಷೆಯ ಚಲನಚಿತ್ರಗಳಿಗೆ ಪ್ರಾಮುಖ್ಯತೆ ಕೊಡುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಭೀರ್ಯ ::  ತೀತಿರ ಶರ್ಮಿಲಿ ಅಪ್ಪಚ್ಚು ನಿರ್ಮಾಣದ ಹಾಗೂ ಆರ್ಯನ್ ನಿರ್ದೇಶನದ “ಭೀರ್ಯ” ಕೊಡವ ಸಿನಿಮಾ 2022ರಲ್ಲಿ ತೆರೆಕಂಡು ಭರ್ಜರಿ ಪ್ರದರ್ಶನ ಕಂಡಿತ್ತು. ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಯ್ಯರಣಿಯಂಡ ಶಿಲಾನ್ ಚೋಂದಮ್ಮ, ಕಾಳಿಮಾಡ ವಂಶಿಕಾ, ಉಡುಪಿಯ ರಾಜ್ ಚರಣ್, ಚಮ್ಮಟೀರ ಪ್ರವೀಣ್ ಉತ್ತಪ್ಪ, ಮಲ್ಲಾಮಾಡ ಶಾಮಲಾ ಸುನಿಲ್, ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರೆ, ಅಜ್ಜಮಾಡ ಅಭಿಶೇಕ್ ಬಿದ್ದಪ್ಪ, ಮತ್ರಂಡ ಶ್ಯಾಮ್ ಪೂಣಚ್ಚ, ಗುಡಿಯಂಗಡ ತಿಮ್ಮಯ್ಯ, ಪೆಮ್ಮಂಡ ರೋಶನ್ ಪೆಮ್ಮಯ್ಯ, ಅಯ್ಯೇಟೀರ ಮಿಥುನ್ ಮಾದಪ್ಪ, ಅಪ್ಪಾಡಂಡ ಧನು ದೇವಯ್ಯ, ಕಾಡ್ಯಮಾಡ ಗೌತಮ್ ಬೋಜಣ್ಣ, ಮಚ್ಚಮಾಡ ಕಾರ್ಯಪ್ಪ, ಐಮಣಿಯಂಡ ನವೀನ್, ರಾಜೇಶ್, ಪ್ರಶಾಂತ್ ಗೋಣಿಕೊಪ್ಪ ಸೇರಿದಂತೆ ಹಲವಾರು ಯುವ ಪ್ರತಿಭೆಗಳು ನಟಿಸಿದ್ದರು. ಫಯಾಜ್ ಖಾನ್ ಸಾಹಸ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರೆ. ಖ್ಯಾತ ಸಂಗೀತ ನಿರ್ದೇಶಕ ಶ್ರೀ ಅವರ ಸಂಗೀತಕ್ಕೆ ಸಾಹಿತಿಗಳಾದ ಚಮ್ಮಟೀರ ಪ್ರವೀಣ್ ಉತ್ತಪ್ಪ ಹಾಗೂ ಗುಡಿಯಂಗಡ ತಿಮ್ಮಯ್ಯ ‌ಸಾಹಿತ್ಯ ಬರೆದು ಖ್ಯಾತ ಹಿನ್ನೆಲೆ ಗಾಯಕರಾದ ಮಚ್ಚಂಡ ಶರಣ್ ಅಯ್ಯಪ್ಪ ಹಾಗೂ ಚಕ್ಕೇರ ಪಂಚಮ್ ಬೋಪಣ್ಣ ಹಾಡಿದ್ದರು. ಭೀರ್ಯ ಕೊಡವ ಚಲನಚಿತ್ರ ಸುಮಾರು ನೂರು ದಿನಗಳತ್ತ ಹೆಜ್ಜೆ ಹಾಕಿದನ್ನು ಇಲ್ಲಿ ಸ್ಮರಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.