ಮಡಿಕೇರಿ ಡಿ.8 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯಗಳಿಗೆ 2024-25ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಡಿಸೆಂಬರ್, 27 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಡಿ.28 ರಂದು ಮಡಿಕೇರಿ ತಾಲ್ಲೂಕಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಡಿ.29 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902911353 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.









