ಪುತ್ತೂರು ಡಿ.8 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳ ಎರಡು ತಂಡಗಳು ಸ್ಟಾರ್ಟ್ ಅಪ್ ಚಾಲೆಂಜಸ್ ಸ್ಪರ್ಧೆಯಲ್ಲಿ ತಲಾ ಒಂದು ಲಕ್ಷ ರೂ.ಗಳ ನಗದು ಬಹುಮಾನವನ್ನು ಗೆದ್ದುಕೊಂಡಿವೆ.
ಕೆಎಸ್‌ಡಿಸಿ ಕರ್ನಾಟಕ ಸರ್ಕಾರ, ಯುಎನ್‌ಡಿಪಿ, ಕೌಶಲ್ಯ ಕರ್ನಾಟಕ, ಸೆವೆನ್ತ್ ಸೆನ್ಸ್, ಎಸ್‌ಎಪಿ ಲ್ಯಾಬ್ಸ್ ಇಂಡಿಯಾ ಲಿಮಿಟೆಡ್, ಕೋಡ್ ಉನ್ನತಿ ಮತ್ತು ಎಜೆಐಇಟಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎ ಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಮಂಡಿಸಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ.
ಸೌರ ಶಕ್ತಿ ಮತ್ತು ಇತರ ಇಂಧನ ವ್ಯವಸ್ಥೆಯನ್ನು ಒಳಗೊಂಡ ಡ್ಯುಯಲ್ ಟ್ಯೂನಿಂಗ್ ಇಂಜಿನ್‌ಗಳನ್ನು ಹೊಂದಿರುವ ದೋಣಿ, ಹಡಗು ಮತ್ತು ಕ್ರೂಸರ್‌ಗಳಲ್ಲಿ ಇಂಧನದ ಮಿತವ್ಯಯವನ್ನು ಸಾಧಿಸುವ ವಿನೂತನ ಕಲ್ಪನೆಯನ್ನು ಯೋಜನೆಯು ಒಳಗೊಂಡಿದೆ. ಕರಾವಳಿ ಭಾಗದ ಮೀನುಗಾರರಿಗೆ ಬಹಳಷ್ಟು ಪ್ರಯೋಜನಕಾರಿಯಾಗಬಲ್ಲ ಈ ಯೋಜನೆಯನ್ನು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳಾದ ಪ್ರಜ್ಞೇಶ್.ಎನ್, ಸುಶಾಂತ್.ಎಚ್.ಪಿ, ಸ್ಪರ್ಶಿತ್.ಐ.ಶೆಟ್ಟಿ ಮತ್ತು ವಿಲಾಸ್ ಚೌಟಾ ಅಭಿವೃದ್ದಿಪಡಿಸಿದ್ದರು.
ದ್ವಿತೀಯ ತಂಡವು ಸೌರ ಶಕ್ತಿ ಮತ್ತು ಪವನ ಶಕ್ತಿಯ ದ್ವಿವಿದ್ಯುತ್ ಉತ್ಪಾಧನಾ ವಿಧಾನವನ್ನು ಅಭಿವೃದ್ದಿಪಡಿಸಿದ್ದು, ಸೌರ ಶಕ್ತಿ ಮತ್ತು ಪವನ ಶಕ್ತಿಯ ಮೂಲಕ ಟರ್ಬೆನ್‌ಗಳನ್ನು ಬಳಸಿಕೊಂಡು ಜಲಸಂಪನ್ಮೂಲಗಳ ಮೂಲಕ ವಿದ್ಯುತ್ ಉತ್ಪಾದಿಸುವುದು ಮತ್ತು ಮಳೆನೀರನ್ನು ಇಂಗಿಸುವ ಯೋಜನೆ ಇದಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ನಿರಂತರ ವಿದ್ಯುತ್ ಪೂರೈಕೆಯ ಜೊತೆಗೆ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಬಹುದಾಗಿದೆ. ಮಳೆನೀರು ಕೊಯಿಲಿನ ಮೂಲಕ ನೀರಿನ ಮಿತವ್ಯಯವನ್ನು ಸಾಧಿಸಬಹುದಾಗಿದೆ. ದ್ವಿತೀಯ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿಗಳಾದ ನೀಕ್ಷಿತಾ ಶೆಟ್ಟಿ, ನೇಹಾ ಮತ್ತು ಸಂಭ್ರಮ್ ಅವರು ಈ ಯೋಜನಾ ವರದಿಯನ್ನು ಮಂಡಿಸಿದ್ದರು.
ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್.ಎಂ.ಶಿಂದೆ ಅವರ ಮಾರ್ಗದರ್ಶನದಲ್ಲಿ ಇದನ್ನು ತಯಾರಿಸಲಾಗಿತ್ತು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*