ಸೋಮವಾರಪೇಟೆ ಡಿ.9 : ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಮತ್ತು ಓನರ್ಸ್ ಅಸೋಸಿಯೇಷನ್ ನ ಸೋಮವಾರಪೇಟೆ ತಾಲೂಕು ಘಟಕದ ನೂತನ ಕಚೇರಿಯನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು.
ಖಾಸಗಿ ಬಸ್ ನಿಲ್ದಾಣ ಕಣಾರ ಕಟ್ಟಡದಲ್ಲಿ ನೂತನವಾಗಿ ತೆರೆಯಲಾಗಿರುವ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಾಲಕರು ಸುರಕ್ಷತೆಯ ಚಾಲನೆಗೆ ಆದ್ಯತೆ ನೀಡಬೇಕು. ಸಂಘಟಿತರಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು
ಹೇಳಿದರು.
ಈ ಸಂದರ್ಭ ರಾಮನಗರ ಗೆಜ್ಜೆಗಾರುಗುತ್ತೆ ಮಠಾಧೀಶ ಶ್ರೀ ಕುಮಾರಸ್ವಾಮೀಜಿ, ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ್, ತಾಲೂಕು ಅಧ್ಯಕ್ಷ ಬಿ.ವಿ. ರವಿ, ಉಪಾಧ್ಯಕ್ಷ ಮಣಿ, ಖಜಾಂಚಿ ಕೆ.ಎನ್. ದೀಪಕ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಸಹ ಕಾರ್ಯದರ್ಶಿ ಲಿಜೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಕಟ್ಟಡ ಮಾಲೀಕ ದಿಲ್ಗಿನ್ ರಾಜ್ ಸೇರಿದಂತೆ ಇತರರು ಹಾಜರಿದ್ದರು.









