ಮಡಿಕೇರಿ ಡಿ.9 : ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಾವೇರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಸನತ್ ಮುತ್ತಣ್ಣ ಭಾಗವಹಿಸಿ ಚಿನ್ನದ ಪದಕ ಪಡೆದು ಕೊಂಡು, ಶಾಲೆಗೆ ಕೀರ್ತಿ ತಂದಿದ್ದಾನೆ.
ಶಾಲಾ ಸಂಯೋಜಕಿ ಬಿ.ಡಿ.ಭಾಗ್ಯ, ಶಾಲೆಯ ಕರಾಟೆ ತರಬೇತುದಾರ ಸೋಮಣ್ಣ ಉಪಸ್ಥಿತರಿದ್ದರು.
ವಿಜೇತ ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಹಾರೈಸಿದ್ದಾರೆ.








