ನಾಪೋಕ್ಲು ಡಿ.11 : ಮಡಿಕೇರಿಯ ನೆಹರು ಯುವ ಕೇಂದ್ರದ ವತಿಯಿಂದ ಮೈಸೂರಿನ ಫಿಲೋಮಿನಾ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ವಿದ್ಯಾಸಂಸ್ಥೆಯ 5ನೇ ತರಗತಿ ವಿದ್ಯಾರ್ಥಿನಿ ಬಿ.ಎ.ಪ್ರಾರ್ಥನಾ ಪೊನ್ನಮ್ಮ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಗಂಗಮ್ಮ ಹಾಗೂ ಕೆ.ಆಯುಷ್ಯ ಕಟಾ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳು ಸೆನ್ ಸಾಯಿ ಚಂದನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ವರದಿ : ದುಗ್ಗಳ ಸದಾನಂದ