ಮಡಿಕೇರಿ ಡಿ.11 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳಿಂದ ಚೇರಂಬಾಣೆಯ ಅರುಣ ಪಿಯು ಕಾಲೇಜಿನಲ್ಲಿ ಪಿಯುಸಿ ನಂತರದ ಅವಕಾಶಗಳು ಕುರಿತು ಕಾರ್ಯಕ್ರಮ ನಡೆಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜ್ ಮತ್ತು ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೀನುಗಾರಿಕೆ ಇಲಾಖೆಯ ಸಹಾಯಕಿ ನಿರ್ದೇಶಕಿ ಮಿಲನ ಭರತ್, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯ ನಂತರ ಇರುವ ಶೈಕ್ಷಣಿಕ ಅವಕಾಶಗಳು ಮತ್ತು ಉದ್ಯೋಗ ಆಧಾರಿತ ಶಿಕ್ಷಣದ ಕುರಿತು ಮಾಹಿತಿ ನೀಡಿದರು.
ಎಲ್ಲರ ಬಳಿ ಸುಲಭವಾಗಿ ಲಭ್ಯವಿರುವ ಮೊಬೈಲ್ ಅನ್ನು ಶೈಕ್ಷಣಿಕ ಮತ್ತು ಔದ್ಯೋಗಿಕ ಮಾಹಿತಿ ಪಡೆಯುವ ಸಲುವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದದರು.
ಬೆಂಗೂರು ಗ್ರಾ.ಪಂ ಉಪಾಧ್ಯಕ್ಷ ಬಡ್ಡೀರ ಸೋಮಣ್ಣ ಮಾತನಾಡಿ, ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಆತ್ಮವಿಶ್ವಾಸವನ್ನು ಹೆಚ್ಚಿಸಿ ಬದುಕನ್ನು ರಚನಾತ್ಮಕವಾಗಿ ಕಟ್ಟಿಕೊಳ್ಳಲು ಸಹಕರಿಸುತ್ತದೆ ಎಂದರು.
ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ದಿನಪತ್ರಿಕೆಗಳನ್ನು, ಗ್ರಂಥಾಲಯಗಳನ್ನು ಬಳಸಿಕೊಂಡು ಪುಸ್ತಕಗಳನ್ನು ಓದಲು ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ, ಮಕ್ಕಳು ಗ್ರಂಥಾಲಯದ ಸದ್ಭಳಕೆ ಮಾಡಿಕೊಳ್ಳಬೇಕು. ಗಳಿಸಿದ ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ, ವಿದ್ಯಾರ್ಥಿ ಜೀವನದಲ್ಲಿ ಓದುವುದೇ ಮುಖ್ಯ ಕೆಲಸವಾಗಿರಬೇಕು ಎಂದು ತಿಳಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ಇಂಚರ ಹಾಗೂ ರುನೈಝ್ ಸಮಾಜ ಕಾರ್ಯ ದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಚೇರಂಬಾಣೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಸುಮನ್ ಹಾಜರಿದ್ದರು. ವಿದ್ಯಾರ್ಥಿ ಪ್ರಜೀತ್ ಸ್ವಾಗತಿಸಿದರು. ಓಶಿನ್ ಕಾರ್ಯಕ್ರಮವನ್ನು ನಿರೂಪಿಸಿ, ರುನೈಝ್ ವಂದಿಸಿದರು.









