ಮಡಿಕೇರಿ ಡಿ.11 : ಧನ್ಯಶ್ರೀ ನೃತ್ಯ ಕಲಾನಿಕೇತನ ವತಿಯಿಂದ ಡಿ.15 ರಂದು ಭರತನಾಟ್ಯ ಕಲಾವಿದೆ ಪ್ರೇಕ್ಷ ಭಟ್ ಅವರ “ಭರತನಾಟ್ಯ ರಂಗಪ್ರವೇಶ” ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿಯ ಶ್ರೀಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಸನದ “ನಾಟ್ಯಶ್ರೀ” ಭಾರತೀಯ ಸಂಗೀತ ನೃತ್ಯ ಕಲಾ ಶಾಲೆಯ ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ ಹಾಗೂ ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯ ಚೇಂದಿರ ನಿರ್ಮಲ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.
ಕಲಾವಿದರು, ಕಲಾ ಆಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರೇಕ್ಷ ಭಟ್ ಅವರ ಪೋಷಕರಾದ ವಿದ್ಯಾಶ್ರೀ ಹಾಗೂ ಎನ್.ಸಿ.ಅಶೋಕ್ ಭಟ್ ಮನವಿ ಮಾಡಿದ್ದಾರೆ.










