ಮಡಿಕೇರಿ ಡಿ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಪಬ್ಲಿಕ್ ಶಾಲೆ, ಪೊನ್ನಂಪೇಟೆ ಇವರ ಸಯುಕ್ತ ಆಶ್ರಯದಲ್ಲಿ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿನಿಧಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮವು ಡಿ.12 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯ ಪದವಿಪೂರ್ವ ಕಾಲೇಜು ಕೆಪಿಎಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ದತ್ತಿದಾನಿಗಳಾದ ಬೆಂಗಳೂರಿನ ಆರ್.ನಾಗೇಂದ್ರ ಕಾಮತ್, ಆರ್.ರಾಜಾರಾವ್ ಮತ್ತು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಎಂ.ಯು.ಚಂಗಪ್ಪ ಭಾಗವಹಿಸಲಿದ್ದಾರೆ.
ದತ್ತಿ ಕಾರ್ಯಕ್ರಮದಂತೆ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ ಕುರಿತು ಪೊನ್ನಂಪೇಟೆ ಕೆಪಿಎಸ್ ಶಾಲೆಯ ಶಿಕ್ಷಕರಾದ ನಳಿನಿ ಅವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 2022-23 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎಲ್. ಅಕ್ಷತಾ ಅವರಿಗೆ ಅಭಿನಂದನೆ ಮತ್ತು ಗೌರವ ಸಮರ್ಪಣೆ ನಡೆಯಲಿದೆ ಎಂದು ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಟಿ.ಬಿ ಜೀವನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









