ಮಡಿಕೇರಿ ಡಿ.11 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಡಿಸೆಂಬರ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕರಾದ ಎಚ್.ಪಿ.ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ಮಾಡಲಿದ್ದಾರೆ.









