ಮಡಿಕೇರಿ ಡಿ.11 : ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ರೋಟರಿ ಜಿಲ್ಲೆ 3181 ರ ಕ್ರೀಡಾಕೂಟದಲ್ಲಿ ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ನ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ದಾಖಲೆಯ ಐದು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
50ವರ್ಷ ಮೇಲ್ಪಟ್ಟವರಿಗಾಗಿ ನಡೆದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟ, ಭಾರದ ಗುಂಡು ಎಸೆತ ಮತ್ತು 400 ಮೀಟರ್ ನಡಿಗೆಯಲ್ಲಿ ಪ್ರಥಮ ಬಹುಮಾನ ಗಳಿಸುವ ಮೂಲಕ ಅಜಿತ್ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು.
ರೋಟರಿ ಜಿಲ್ಲೆ 3181ರ ಕೊಡಗು, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮೂಡಬಿದ್ರೆ ಆಳ್ವಾಸ್ ಕಾಲೇಜ್ ನ ಅಥ್ಲೆಟಿಕ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜಿತ್ ನಾಣಯ್ಯ ಬಹುಮಾನ ಪಡೆದರು.







