ಸುಂಟಿಕೊಪ್ಪ ಡಿ.11 : ಸುಂಟಿಕೊಪ್ಪ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.
ದ್ವಾರಕ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಜ.4 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








