ಮಡಿಕೇರಿ ಡಿ.12 : ‘ಪಿಂಚಣಿ’ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಕೊಡಗು ಜಿಲ್ಲೆಯಾದ್ಯಂತ ಕೆಲಸ ಸ್ಥಗಿತಗೊಳಿಸಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪಿ.ಎಸ್.ಕುರಿಯನ್ ಹಾಗೂ ಎನ್‍ಯುಜಿಡಿಎಸ್ (ನ್ಯಾಷನಲ್ ಯೂನಿಯನ್ ಆಫ್ ಗ್ರಾಮೀಣ ಡಾಕ್ ಸೇವಕ್ಸ್) ಸಂಘಟನೆಯ ಅಧ್ಯಕ್ಷ ಪಿ.ಇ.ಸುಶೀಲ ಅವರ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಕ್ಕೂ ಹೆಚ್ಚಿನ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು.
ಜಂಟಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ಬಿ.ಎಂ.ಮಂಜುನಾಥ್ ಮಾತನಾಡಿ, ಕಮಲೇಶ್ ಚಂದ್ರ ಅವರ ವರದಿಯಂತೆ, ಗ್ರಾಮೀಣ ಅಂಚೆ ಸೇವಕರಿಗೆ ನಿವೃತ್ತಿಯ ಬಳಿಕ ಪಿಂಚಣಿ ಸೌಲಭ್ಯವನ್ನು ಮತ್ತು ಅಗತ್ಯ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಅನಿರ್ದಿಷ್ಟ ಕಾಲದ ಮುಷ್ಕರಕ್ಕೆ ಮುಂದಾಗುವುದಾಗಿ ಸ್ಪಷ್ಟಪಡಿಸಿದರು.
::: ಕೆಲಸ ಸ್ಥಗಿತ :::
ಕೊಡಗು ಜಿಲ್ಲೆಯಾದ್ಯಂತ 197 ಅಂಚೆ ಕಚೇರಿಗಳಿದ್ದು, ಅಲ್ಲಿ 295 ಅಂಚೆ ಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇಂದು ತಮ್ಮ ಕಾರ್ಯ ಸ್ಥಗಿತಗೊಳಿಸಿದ್ದಾರೆ ಎಂದು ಬಿ.ಎಂ.ಮಂಜುನಾಥ್ ಹೇಳಿದರು.
ಸೇವಾ ಹಿರಿತನದ ಆಧಾರದ ಮೇಲೆ ಸುದೀರ್ಘ ಸೇವೆ ಸಲ್ಲಿಸಿದ ಗ್ರಾಮೀಣ ಅಂಚೆ ನೌಕರರಿಗೆ ಇನ್‍ಕ್ರಿಮೆಂಟ್ ಒದಗಿಸಬೇಕು, ಅಂಚೆ ಇಲಾಖೆ ಅವೈಜ್ಞಾನಿಕವಾದ ಮೇಳಗಳನ್ನು ನಡೆಸುವುದನ್ನು ನಿಲ್ಲಿಸಬೇಕು, ಗುಂಪು ವಿಮಾ ಸೌಲಭ್ಯವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು, ಗ್ರಾಮೀಣ ಅಂಚೆ ನೌಕರರ ಗ್ರಾಚ್ಯುಟಿಯನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು, ಅಂಚೆ ಸೇವಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಂಟಿ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಪಿ.ಎಸ್.ಕುರಿಯನ್, ಉಪಾಧ್ಯಕ್ಷ ಎ.ಯು.ಪೂಣಚ್ಚ, ಖಜಾಂಚಿ ಬಿ.ಪಿ.ಅಚ್ಚಯ್ಯ, ಎನ್‍ಯುಜಿಡಿಎಸ್‍ಯು ಸಂಘಟನೆಯ ಉಪಾಧ್ಯಕ್ಷ ಜಿನ್ನಪ್ಪ, ರವಿ ಗುಹ್ಯ, ಕೆ.ಎಸ್.ಭವಾನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*