ಮಡಿಕೇರಿ ಡಿ.7 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*