ಮಡಿಕೇರಿ ಡಿ.12 : ಬೆಳಗಾವಿ ಅಧಿವೇಶನದಲ್ಲಿ ಕೊಡಗಿನ ಸಮಸ್ಯೆಗಳ ಬಗ್ಗೆ ಬಿಜೆಪಿ ನಾಯಕಿ ಡಾ.ತೇಜಸ್ವಿನಿ ಗೌಡ ಬೆಳಕು ಚೆಲ್ಲಿದ್ದರು.
ಫೀಲ್ಡ್ ಮಾರ್ಷಲ್ ಕೊಡಂದೇರ ಎಂ.ಕಾರ್ಯಪ್ಪ ಅವರಿಗೆ ಭಾರತರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಕಾವೇರಿ ತುಲಾ ಸಂಕ್ರಮಣದಂದು ಸಾರ್ವತ್ರಿಕ ರಜೆ ಬದಲು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಬೇಕು, ತಿತಿಮತಿ ಆನೆಚೌಕೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸುಮಾರು 8ಕಿ.ಮಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದರು.
ಡಾ.ತೇಜಸ್ವಿನಿ ಗೌಡ ಅವರು ಜಿಲ್ಲೆಗೆ ಆಗಮಿಸಿದ ಸಂದರ್ಭ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಫೀ ಮಾ ಕೊಡಂದೇರ ಕಾರ್ಯಪ್ಪ ಅವರಿಗೆ ಭಾರತರತ್ನ ನೀಡಬೇಕು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವದಂದು ರಾಜ್ಯಾದ್ಯಂತ ರಜೆ ನೀಡಬೇಕು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮನವಿ ನೀಡಿದ್ದರು. ಇದಕ್ಕೆ ಸ್ಪಂದಿಸಿದ ಡಾ.ತೇಜಸ್ವಿನಿ ಗೌಡ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಗಮನ ಸೆಳೆದರು.