ಬೆಳಗಾವಿ ಡಿ.13 : ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕ ಜೆ.ಟಿ.ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*