ಮಡಿಕೇರಿ ಡಿ.13 : ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2023-24 ನೇ ಸಾಲಿನ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯು ಗದಗ ನಗರದ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ನಡೆಯಿತು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 18 ಬಾಲಕಿಯರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ಪಂದ್ಯಾವಳಿಯಲ್ಲಿ ವಿಜಯಶಾಲಿಯಾಗಿದ್ದು, ಪಂಜಾಬ್‍ನ ಜಲಂಧರ್‍ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್ ತಿಳಿಸಿದ್ದಾರೆ. ಈ ಸಂಬಂಧ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಇತರರು ಅಭಿನಂದಿಸಿದ್ದಾರೆ.














