ಮಡಿಕೇರಿ ಡಿ.13 : ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘವನ್ನು ಪುನಶ್ಚೇತನಗೊಳಿಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸಮಾಪನಾ ಆದೇಶವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಂಘದ ಅಮ್ಮತ್ತಿಯ ಸದಸ್ಯರ ಹಿತರಕ್ಷಾ ಸಮಿತಿ ಮನವಿ ಮಾಡಿದ ಮೇರೆಗೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸಮಾಪನ ಆದೇಶವನ್ನು ರದ್ದುಪಡಿಸಿ, ಆಡಳಿತ ಅಧಿಕಾರಿಯನ್ನು ನೇಮಕ ಮಾಡಬೇಕು. ಸಂಘವನ್ನು ರೈತರಿಗೆ ಮರಳಿ ನೀಡಬೇಕು ಎಂದು ಒತ್ತಾಯಿಸಿದರು.
ಸಹಕಾರಿ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಡನೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣನವರು ಇಂದು ಸುವರ್ಣ ಸೌಧ, ಬೆಳಗಾವಿಯಲ್ಲಿ ಸಭೆ ನಡೆಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಸಹಕಾರ ಸಚಿವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಂಘದ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.









