ಮಡಿಕೇರಿ ಡಿ.13 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಇವರ ಸಹಕಾರದಲ್ಲಿ ವಿಶೇಷ ಘಟಕ ಯೋಜನೆಯಡಿ ಸಂವಿಧಾನ ಶಿಲ್ಪಿ, ಭಾರತ ರತ್ನ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು’ ಕಾರ್ಯಕ್ರಮವು ಡಿ.14 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಶಾಮ್ ಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಮದೆನಾಡು ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಪಾಲ್ಗೊಳ್ಳಲಿದ್ದಾರೆ.









