Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ-ನಿವಾಸ ಶಿಬಿರ ಸಂಪನ್ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ-ನಿವಾಸ ಶಿಬಿರ ಸಂಪನ್ನ*

ಡಿಸೆಂಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.14 : ಸ್ಕೌಟ್ಸ್ ಮತ್ತು ಗೈಡ್ಸ್ ಸನಿವಾಸ-2023 ಶಿಬಿರವು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಿತು.
ಶಾಲೆಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಕ್ಕಳು ಬಾಲ್ಯದಲ್ಲಿಯೇ ಶಿಸ್ತು ಮತ್ತು ಮೌಲ್ಯಗಳನ್ನು ರೂಪಿಸಿಕೊಳ್ಳಲು ಶಿಬಿರ ಸಹಕಾರಿಯಾಗಿದೆ. ಬೌದ್ಧಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ, ಪ್ರತಿ ಮಗುವು ಉತ್ತಮ ನಾಗರೀಕನಾಗಲು ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ, ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಜೀವನ ಕೌಶಲ್ಯಗಳನ್ನು ತಿಳಿದುಕೊಂಡು ಬಾಳಿನಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ಸಿಗುವಂತಾಗುತ್ತದೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಶುಭ ಹಾರೈಸಿ, ದ್ವಿತೀಯ ಸೋಪಾನ ಮತ್ತು ತೃತೀಯ ಸೋಪಾನ ಪರೀಕ್ಷೆಗಳ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸ್ಕೌಟ್ ಎ.ಡಿ.ಸಿ.ಹಾರಿಸ್, ಸ್ಕೌಟ್ ಮತ್ತು ಗೈಡ್ ನಲ್ಲಿ ತಮಗಾದ ಅನುಭವಗಳನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಜಿಲ್ಲಾ ಗೈಡ್ ಆಯುಕ್ತೆ ಸುಲೋಚನಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಚಂದ್ರಕಲಾ, ಎಸ್. ಡಿ. ಎಂ. ಸಿ ಸದಸ್ಯೆ ಜ್ಯೋತಿ,ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಮತ್ತು ಶಿಬಿರದ ನಾಯಕ ರಂಜಿತ್ ಕೆ. ಯು. ಕಾರ್ಯದರ್ಶಿ ಉಷಾರಾಣಿ ಕೆ. ಬಿ. ಉಪಸ್ಥಿತರಿದ್ದ ಸ್ಥಳೀಯ ಸಂಸ್ಥೆ ಸಂಪಾಜೆಗೆ ಒಳಪಟ್ಟ ಕೆ. ಪಿ. ಎಸ್. ಪ್ರೌಢ ಮತ್ತು ಪ್ರಾಥಮಿಕ ವಿಭಾಗ,ಶ್ರೀ ರಾಮ ಟ್ರಸ್ಟ್ ಶಾಲೆ,ಅಂಕುರ್ ಶಾಲೆ,ಎಕ್ಸೆಲ್ ಶಾಲೆಯ 125 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ಗಳು ಭಾಗವಹಿಸಿದ್ದರು.
ವೀರ ಮರಣವನ್ನಪ್ಪಿದ ಕ್ಯಾ.ಪ್ರಾಂಜಲ್, ಕಾಡಾನೆ ಕಾರ್ಯಚರಣೆಯಲ್ಲಿ ಮೃತಪಟ್ಟ ಅರ್ಜುನ ಆನೆ ಹಾಗೂ ಹಿರಿಯ ನಟಿ ಲೀಲಾವತಿಯವರಿಗೆ ಪುಷ್ಪ ನಮನ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.

ಶಿಬಿರಾಗ್ನಿ: : ಶಿಬಿರಾಗ್ನಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಿಬಿರದ ಎರಡನೇ ದಿನ ಬಿ. ಪಿ. ಸಿಕ್ಸ್ ವ್ಯಾಯಾಮ, ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ನಂತರ ಮಕ್ಕಳಿಂದಲೇ ಅಡುಗೆ ತಯಾರಿಸುವ ಕಾರ್ಯಕ್ರಮ ನಡೆಯಿತು. ನಂತರ ಮಕ್ಕಳು ಮನೋರಂಜನ ಆಟಗಳು ಮತ್ತು ಸಾಹಸಮಯ ಕ್ರೀಡೆಯಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದರು. ನಾಯಕರಿಂದ ಧ್ವಜದ ನಿಯಮ, ಸಮವಸ್ತ್ರ, ಬ್ಯಾಡ್ಜ್ ಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಮಾರೋಪ: ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎ.ಡಿ.ಸಿ.ಸ್ಕೌಟ್ ಮತ್ತು ಎಸ್.ಡಿ. ಎಂ.ಸಿ ಉಪಾಧ್ಯಕ್ಷ ಕೆ.ಎ.ಹಾರಿಸ್ ವಹಿಸಿ ಶಿಬಿರದಲ್ಲಿ ನಡೆದ ಚಟುವಟಿಕೆಗಳ ಮಹತ್ವ, ಅವುಗಳನ್ನು ಅಳವಡಿಸಿಕೊಳ್ಳುವ ರೀತಿ, ಬದುಕಿನ ಪಾಠದ ಬಗ್ಗೆ ಮಾತನಾಡಿದರು. ಶಿಬಿರದ ನಾಯಕರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ನಾಯಕ ರಂಜಿತ್ ಶಿಬಿರದ ವರದಿ ಮಂಡಿಸಿದರು. ಸಹ ನಾಯಕ ಸ್ಕೌಟ್ ಮಾಸ್ಟರ್ ಕುಮಾರಸ್ವಾಮಿ ಮತ್ತು ಗೈಡ್ ಕ್ಯಾಪ್ಟನ್ ಜಾಜಿ ಅನಿಸಿಕೆ ನುಡಿಯಾಡಿದರು. ಉಪಸ್ಥಿತರಿದ್ದ ಶಿವಣ್ಣ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.
ಶಿಬಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಾದ ಸರಿತ, ಅಮಿತ, ಸೀತಮ್ಮ, ಸೋನಿಯಾ, ಚಂದ್ರಕಲಾ, ಗೀತ ಮತ್ತು ಖಜಾಂಚಿ ಬಿ.ಕೆ.ಗಂಗಮ್ಮ ಹಾಜರಿದ್ದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಧ್ವಜಾವರೋಹಣದೊಂದಿಗೆ ಶಿಬಿರ ಸಂಪನ್ನಗೊಂಡಿತ್ತು.
ಕಾರ್ಯದರ್ಶಿ ಉಷಾರಾಣಿ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.