ಮಡಿಕೇರಿ ಡಿ.14 : ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರ್ನಾಟಕ ಸರ್ಕಾರದ ಇಂಧನ ಸಚಿವರ ಗಮನ ಗಮನ ಸೆಳೆದರು.
ಸದನದ ಪ್ರಶ್ನೋತ್ತರ ವೇಳೆಯಲ್ಲಿ ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಕಿ ಉಳಿದಿರುವ 10 ಹೆಚ್.ಪಿ ವರೆಗಿನ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡುವ ಬಗ್ಗೆ, ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ಸೋಲಾರ್ ಪಂಪ್ ಸೆಟ್ ಗಳಿಗೆ ಅವಕಾಶ ಕಲ್ಪಿಸುವ ವ್ಯವಸ್ಥೆ ಹಾಗೂ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿಶೇಷವಾದ ಗಮನ ಹರಿಸಲು ಮನವಿ ಮಾಡಿದರು.




































