ಮಡಿಕೇರಿ ಡಿ.14 : ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸದ ಸ್ಥಾನದಿಂದ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು.
ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿದ ವಿರಾಜಪೇಟೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿದರು.
ಇಬ್ಬರು ವ್ಯಕ್ತಿಗಳು ಸಂಸತ್ ಭವನಕ್ಕೆ ನುಗ್ಗಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ಸಂಸತ್ ಭವನದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹರನ್ನು ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕು. ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳಿಗೆ ಸಂಸದರ ಮೂಲಕ ಪಾಸ್ ಸಿಕ್ಕಿರುವುದು ಖಾತ್ರಿಯಾಗಿದೆ. ಇದು ಗಂಭೀರ ಪ್ರಕರಣವಾಗಿದ್ದು, ಪ್ರತಾಪ್ ಸಿಂಹ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಂಸತ್ ಸದಸ್ಯರಿಗೇ ರಕ್ಷಣೆ ನೀಡಲಾಗದ ಕೇಂದ್ರ ಸರ್ಕಾರ ದೇಶದ ಜನರಿಗೆ ಯಾವ ರೀತಿಯ ರಕ್ಷಣೆ ನೀಡುತ್ತದೆ ಎಂದು ಪ್ರಶ್ನಿಸಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮಾತನಾಡಿ ಸಂಸದರಿಂದ ಪಾಸ್ ಪಡೆದು ಸಂಸತ್ ನ ವೀಕ್ಷಕರ ಗ್ಯಾಲರಿಗೆ ಪ್ರವೇಶ ಪಡೆದಿದ್ದ ಆರೋಪಿಗಳು, ಹಳದಿ ಬಣ್ಣದ ಹೊಗೆ ಹಾಕಿ ಆತಂಕ ಸೃಷ್ಟಿ ಮಾಡಿರುವುದು ಭದ್ರತಾ ಲೋಪವಾಗಿದೆ. ಪ್ರತಾಪ್ ಸಿಂಹ ಅವರು ಈ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ವಿರಾಜಪೇಟೆ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಾದಂಡ ಪಿ.ತಿಮ್ಮಯ್ಯ, ಮಾತನಾಡಿ ಸಂಸತ್ ಅಧಿವೇಶನದಲ್ಲಿ ನಡೆದಿರುವ ಘಟನೆ ಜನತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮೈಸೂರು- ಕೊಡಗು ಲೋಕಾಸಭಾ ಕ್ಷೇತ್ರದ ಸಂಸದರ ಕಛೇರಿಯಿಂದ ನೀಡಲಾಗಿರುವ ಪಾಸ್ ಪಡೆದ ವ್ಯಕ್ತಿಗಳಿಂದ ನಡೆದಿರುವ ಈ ಘಟನೆ ದೊಡ್ಡ ಅಪರಾಧವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಮುಖರಾದ ಚಿಲ್ಲವಂಡ ಕಾವೇರಪ್ಪ, ಪುರಸಭೆಯ ಸದಸ್ಯರಾದ ಮೊಹಮ್ಮದ್ ರಾಫಿ, ಡಿ.ಪಿ.ರಾಜೇಶ್ ಪದ್ಮನಾಭ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೊಳಮಂಡ ರಫೀಕ್, ಸೈಯದ್ ಶಬೀರ್, ಕೆ.ಎಸ್. ಗೋಪಾಲಕೃಷ್ಣ, ಮೆಲ್ವಿನ್ ಲೋಬೋ, ಜೋಕಿಂ ರೋಡ್ರಿಗಸ್, ಶಶಿಧರನ್, ವಿರಾಜಪೇಟೆ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*