ಮಡಿಕೇರಿ ಡಿ.14 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 22 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://.shp.karnataka.gov.in
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ರೂ.1.00 ಲಕ್ಷ. ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://.bcwd.karnataka.gov.in ಅನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*