ಕುಶಾಲನಗರ, ಡಿ.14 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಈ ತಿಂಗಳ 23 ರಿಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷರಾದ ಹೆಚ್ ವಿ ಶಿವಪ್ಪ ತಿಳಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ದಾವಣಗೆರೆ ನಗರದಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಈ ಸಂಬಂಧ ದಾವಣಗೆರೆ ಜಿಲ್ಲಾ ಘಟಕ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ.
ಈ ಮಹಾ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರನ್ನು ಆಹ್ವಾನಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶರಣ ಶರಣೆಯರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯಿಂದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶರಣ ಶರಣೆಯರು ಈ ತಿಂಗಳ 17ರ ಒಳಗೆ ಮಹಾಸಭಾಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ ಅವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಗುಡ್ಡೆ ಹೊಸೂರು ಘಟಕದ ಪ್ರಮುಖರಾದ ಬಿ ಸಿ ಮಲ್ಲಿಕಾರ್ಜುನ ಇದ್ದರು.