ನಾಪೋಕ್ಲು ಡಿ.15 : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಹೊಟೇಲ್, ಬೇಕರಿ, ಅಂಗಡಿ ,ಕ್ಯಾಂಟೀನ್ ಗಳ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡಬೇಕು ತಪ್ಪಿದ್ದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಂಚಾಯಿತಿಯಿಂದ ಹಲವಾರು ಬಾರಿ ಈ ಹಿಂದೆ ನೋಟಿಸಿ ನೀಡಲಾಗಿದ್ದರು ಕೂಡ ಪದೇ ಪದೇ ತ್ಯಾಜಗಳನ್ನು ರಸ್ತೆ ಬದಿಗೆ ಹಾಗೂ ಪಂಚಾಯತಿಯ ಮುಂಭಾಗದಲ್ಲಿ ಸುರಿಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಂಚಾಯಿತಿಯ ಕಸದ ವಾಹನಕ್ಕೆ ಇಲೇವಾರಿ ಮಾಡುವಂತೆ ತಿಳಿಸಿದರು.
ಹಸಿ ಕಸ ಮತ್ತು ಒಣ ಕಸ ವಿಂಗಡನೆ ಮಾಡದಿದ್ದಲ್ಲಿ ಪಂಚಾಯಿತಿಯಿಂದ ಕಸವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ಅವರು, ಬಟ್ಟೆ ಬ್ಯಾಗ್ಗಳನ್ನು ಉಪಯೋಗಿಸುವುದರ ಮೂಲಕ ಪ್ಲಾಸ್ಟಿಕ್ ನಿಷೇಧಕ್ಕೆ ಪಂಚಾಯಿತಿಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದ ಅವರು, ಪ್ಲಾಸ್ಟಿಕ್ ಬಳಕ್ಕೆ ಕಂಡು ಬಂದರೆ ಪಂಚಾಯಿತಿಯಿಂದ ದಂಡ ವಿಧಿಸಲಾಗುವುದು ಎಂದು ಚೋಂದಕ್ಕಿ ಎಚ್ಚರಿಕೆ ನೀಡಿದರು.
ವರದಿ : ದುಗ್ಗಳ ಸದಾನಂದ










