ವಿರಾಜಪೇಟೆ ಡಿ.15 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ವಿರಾಜಪೇಟೆ ತಾಲೂಕು ವಿರಾಜಪೇಟೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ತೋಮರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.
ವಿರಾಜಪೇಟೆ ಸ.ಪ್ರ,ದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಕೆ.ಬಸವರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಸಂಸ್ಕೃತಿ ಧಾರ್ಮಿಕ ಆಚರಣೆ ಮಹತ್ವ, ಧರ್ಮ ಕಾರ್ಯಗಳಿಂದ ಆಗುವ ಒಳಿತುಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೆ.ಧ.ಗ್ರಾ. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು, ವಿಮಾ ಕಾರ್ಯಕ್ರಮ, ವಿಪತ್ತು ನಿರ್ವಹಣೆ ಕಾರ್ಯಕ್ರಮ, ಮಾಶಾಸನ, ನಮ್ಮೂರು ನಮ್ಮ ಕೆರೆ, ಜನ ಮಂಗಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಪೂಜಾ ಸಮಿತಿ ಅಧ್ಯಕ್ಷ ಕೆ.ಎಸ್.ಅರುಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷ ಮಾಳೇಟಿರ ಜಪ್ರಿ ಉತ್ತಪ್ಪ, ತೋರ ಗ್ರಾಮದ ಪ್ರಗತಿಪರ ಕೃಷಿಕರಾದ ಕೆ.ಡಿ ಪ್ರಭುಕುಮಾರ್, ಶ್ರೀ.ಕ್ಷೆ.ಧ.ಗ್ರಾ ಯೋಜನೆಯ ಯೋಜನಾಧಿಕಾರಿ ದಿನೇಶ್, ಗ್ರಾ.ಪಂ ಸದಸ್ಯರುಗಳಾದ ಮೀನಾಕ್ಷಿ, ಜಯಂತಿ, ಕೆ.ಎಂ. ರಾಮಯ್ಯ, ವಿರಾಜಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ವಿಜಯಕುಮಾರ, ಸುನಿತಾ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ವಿರಾಜಪೇಟೆ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಜರಿದ್ದರು. ವಲಯದ ಪ್ರಗತಿ ವರದಿಯನ್ನು ತೇಜಸ್ವಿನಿ ಮಂಡಿಸಿದರು.








