ಕುಶಾಲನಗರ ಡಿ.15 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯ ಮಟ್ಟದ ಡಾ. ಎಚ್.ನರಸಿಂಹಯ್ಯ ಪ್ರಶಸ್ತಿಗೆ ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಭಾಜನರಾಗಿದ್ದಾರೆ.
2023 ನೇ ಸಾಲಿನ ಪ್ರಶಸ್ತಿಗೆ ರಾಜ್ಯದಲ್ಲಿ 37 ಸಾಧಕರು ಆಯ್ಕೆಯಾಗಿದ್ದು, ಕೊಡಗು ಜಿಲ್ಲೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಶಂಭುಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.29 ಮತ್ತು 30 ರಂದು ರಾಯಚೂರಿನಲ್ಲಿ ನಡೆಯಲಿರುವ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.









