ಮಡಿಕೇರಿ ಡಿ.16 : ದಕ್ಷಿಣ ವಲಯದ ಡಿಐಜಿ ಡಾ. ಎಂ.ಬಿ. ಬೋರಲಿಂಗಯ್ಯ ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು.
ಮುಂಜಾನೆ ಕವಾಯತಿನಲ್ಲಿ ಭಾಗವಹಿಸಿ, ಬಳಿಕ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿ ಗಳೊಂದಿಗೆ ಸಭೆಯನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಿದರು.
ನಂತರ ಜಿಲ್ಲಾ ಪೊಲೀಸ್ ಕಚೇರಿಯ ಪರಿವೀಕ್ಷಣೆ ಯನ್ನು ನಡೆಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.