ಮಡಿಕೇರಿ ಡಿ.16 : ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.18 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ” ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದರು.
ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಶ್ರೀ ಬೂತ ಬಲಿ, 12.20 ಗಂಟೆಗೆ ಮಹಾಮಂಗಳಾರತಿ ಜರುಗಲಿದ್ದು, ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಉತ್ಸವದ ಪ್ರಯುಕ್ತ ಬೆಳಗ್ಗೆ 7 ರಿಮದ 12 ಗಂಟೆಯವರೆಗೆ ನಾಗ ದೇವರಿಗೆವಿಶೇಷ ಅಭಿಷೇಕ ಪೂಜೆಗಳು ನಡೆಯಲಿವೆ. ನಾಗದೋಷ ಪರಿಹಾರಕ್ಕೆ ಭಕ್ತಾದಿಗಳು ಬೆಳ್ಳಿಯ ಹೆಡೆ, ಬೆಳ್ಳಿಯ ಮೊಟ್ಟೆಗಳನ್ನು ಸಮರ್ಪಿಸಲು ಅವಕಾಶವಿದೆ. ಇದಕ್ಕಾಗಿ ದೇವಸ್ಥಾನದ ವತಿಯಿಂದ ಬೆಳ್ಳಿಯ ಹೆಡೆ ಮತ್ತು ಬೆಳ್ಳಿಯ ಮೊಟ್ಟೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆಯೆಂದು ವಿವರಿಸಿದರು.
ಪೂಜಾ ವ್ಯವಸ್ಥೆಗೆ 9448145554, 9448406534, 9448135592 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದೇವಾಯದ ಧರ್ಮದರ್ಶಿ ಕೆ.ಎಸ್.ರಮೇಶ್, ದೇವಾಲಯ ಸಮಿತಿ ಉಪಾಧ್ಯಕ್ಷ ಗಿರೀಶ್ ಆರಾಧನ, ಉತ್ಸವ ಸಮಿತಿ ಅಧ್ಯಕ್ಷ ಪಿ.ವಿನೋದ್, ಮಹಿಳಾ ವೇದಿಕೆ ಉಪಾಧ್ಯಕ್ಷೆ ದೀಪಾ ಕಾವೇರಪ್ಪ, ಹಾಗೂ ಪ್ರಮುಖರಾದ ಸದಾಶಿವ ಶೆಟ್ಟರು ಉಪಸ್ಥಿತರಿದ್ದರು.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*