Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.23 ರಿಂದ 29 ರವರೆಗೆ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.23 ರಿಂದ 29 ರವರೆಗೆ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಡಿಸೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಡಿ.23 ರಿಂದ 29 ರವರೆಗೆ ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರು ಈ ಕುರಿತು ಮಾಹಿತಿ ನೀಡಿ, ಗ್ರಾಮಸ್ಥರು ಮತ್ತು ದಾನಿಗಳ ಸಹಕಾರದಿಂದ ಕಟ್ಟೆಮಾಡು ಗ್ರಾಮದ 3.80 ಏಕರೆ ಪ್ರದೇಶದಲ್ಲಿ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇಗುಲವನ್ನು ನಿರ್ಮಿಸಲಾಗಿದೆ. ದೇವಸ್ಥಾನದಲ್ಲಿ ಶಿವಲಿಂಗದೊಂದಿಗೆ ತೀರ್ಥಮಂಟಪ, ಶ್ರೀ ವಿಷ್ಣುವಿನ ಗುಡಿ, ಶ್ರೀಗಣಪತಿ ಗುಡಿ, ನಾಗನಕಟ್ಟೆ, 46 ಅಡಿಯ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆಯೆಂದು ತಿಳಿಸಿದರು.
ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಮತ್ತು ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿಗಳವರ ನೇತೃತ್ವದಲ್ಲಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ. ಡಿ.23 ರಂದು ಸಂಜೆ ಕ್ಷೇತ್ರದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಮಧ್ಯಾಹ್ನ ಅನ್ನದಾನ ನಡೆಯಲಿದೆ. ಅಂದು ಸಂಜೆ ಅಂಕುರ ಪೂಜೆ, ದುರ್ಗಾನಮಸ್ಕಾರ ನಡೆಯಲಿದೆಯೆಂದರು.
ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಶಕ್ತಿ ಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಕುಡೆಕಲ್ಲು ಧಾರ್ಮಿಕ ಭಾಷಣ ಮಾಡಲಿದ್ದು, ರಾತ್ರಿ 7 ಗಂಟೆಗೆ ಬಾಯಾರಿನ ಹಂಸಧ್ವನಿ ಮೆಲೋಡಿಸ್ ಅವರಿಂದ ರಸಮಂಜರಿ ನಡೆಯಲಿದೆಯೆಂದು ಮಾಹಿತಿ ನೀಡಿದರು.
ಡಿ.25 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ನಡೆಯಲಿದ್ದು, ಸಂಜೆ 7 ಗಂಟೆಗೆ ಚಿ.ನಾ. ಸೋಮೇಶ್ ಅವರಿಂದ ಧಾರ್ಮಿಕ ಭಾಷಣ ನಡೆಯಲಿದೆ. ಡಿ.26 ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರಿಂದ ಧಾರ್ಮಿಕ ಭಾಷಣ ನಡೆಯಲಿದೆಯೆಂದು ಹೇಳಿದರು.ಡಿ.27 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಶೋಭಾ ಸುಬ್ಬಯ್ಯ ಅವರಿಂದ ಧಾರ್ಮಿಕ ಭಾಷಣ ನಡೆಯಲಿದೆ.
ಡಿ.28 ರಂದು ಬೆಳಗ್ಗೆ ಪುನರ್ವಸು ನಕ್ಷತ್ರ 7.26 ರ ಶುಭ ಮುಹೂರ್ತದಲ್ಲಿ ದೇವರ ಪ್ರತಿಷ್ಠಾ ಕಾರ್ಯಗಳು ನಡೆಯಲಿದೆ. ಸಂಜೆ ಸಾಹಿತಿ ನಾಗೇಶ್ ಕಾಲೂರು ಅವರಿಂದ ಧಾರ್ಮಿಕ ಭಾಷಣವನ್ನು ಏರ್ಪಡಿಸಲಾಗಿದೆ. ಕೊನೆಯ ದಿನವಾದ ಡಿ.29 ರಂದು ಮಹಾದೇವ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ವಾರದ ಕಾಲ ನಡೆಯುವ ಧಾರ್ಮಿಕ ಪೂಜಾ ಕಾರ್ಯಗಳ ಸಂದರ್ಭ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆಯೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಕಳ್ಳೀರ ಗಣಪತಿ, ಕೋಶಾಧಿಕಾರಿ ಪೂಣಚ್ಚ ತೋರೇರ, ಪದಾಧಿಕಾರಿಗಳಾದ ಅಪ್ಪೆಯಂಡ್ರ ಮಣಿ ಉತ್ತಪ್ಪ, ತೋರೇರ ಕಾಶಿ ಕಾರ್ಯಪ್ಪ ಹಾಗೂ ನಂದೇಟಿರ ಗಣಪತಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.