ಕುಶಾಲನಗರ ಡಿ.16 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮತ್ತು ಆರ್.ಪಿ.ಐ.ಕೆ.ಕರ್ನಾಟಕ ಪಕ್ಷದ ಕೊಡಗು ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಸಭೆ ಡಿ.17ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ.ಬಿ.ರಾಜು ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಿ.17 ರಂದು ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ರಾಜ್ಯಮಟ್ಟದ ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ. ಪಕ್ಷವನ್ನು ಪುನರ್ ರಚಿಸಿ ಸಂಘಟನೆಯನ್ನು ಮತ್ತಷ್ಟು ಸಶಕ್ತಗೊಳಿಸಲು ಆಸಕ್ತಿ ಹೊಂದಿರುವವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಸಾಮಾಜಿಕ ಚಟುವಟಿಕೆಗಳು, ಹೋರಾಟಗಳ ಮೂಲಕ ನೊಂದವರ ಪರ ದನಿಯಾಗಬೇಕಿದೆ, ಸಮಸ್ಯೆಗಳ ವಿರುದ್ದ ಪ್ರತಿಭಟಿಸುವಂತಾಗಬೇಕಿದೆ. ಸರಕಾರದ ಸೌಲಭ್ಯಗಳನ್ನು ಪಡೆದು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲೂ ಸಂಘಟನೆ ಪದಾಧಿಕಾರಿಗಳು ಕ್ರಮವಹಿಸುವಂತಾಗಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ದೊರಕಬೇಕೆಂಬುದು ಸಂಘಟನೆಯ ಆಶಯ. ಅಂದು ಮುಕ್ತವಾಗಿ ಯಾರೂ ಬೇಕಾದರೂ ಪಕ್ಷ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರಕಾರಗಳು ವಿಫಲವಾಗುಲಿವೆ.
ಉಚಿತಗಳ ಆಮಿಷಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಚುನಾವಣೆಗೆ ಎಸುರಿಸುತ್ತಿರುವ ಕ್ರಮ ಸರಿಯಲ್ಲ ಎoದ ಅವರು ಸ್ಥಳೀಯ ಆಡಳಿತಗಳು ಕೂಡ ಜನಸಾಮಾನ್ಯರ ಅಭಿವೃದ್ದಿಗೆ ಯೋಜನೆಗಳನ್ನು ರೂಪಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.
ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂದರರಾಜು ಸಂಘಟನೆಯ ಚಟುವಟಿಕೆಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭ ಸಂಘಟನೆ ಪ್ರಮುಖರಾದ ಸ್ವಾಮಿ,ಮಂಜುನಾಥ್, ಸುರೇಶ್ ಕುಮಾರ್, ಕೆ.ಜೆ.ಸ್ವಾಮಿ ಉಪಸ್ಥಿತರಿದ್ದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*