Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೃಹ ರಕ್ಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೃಹ ರಕ್ಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

ಡಿಸೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 : ಹಬ್ಬ, ಜಾತ್ರೆ, ಚುನಾವಣೆ, ಪ್ರಮುಖ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭದಲ್ಲಿ ಪೊಲೀಸರ ಜತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕದಳದ ಸಿಬಂಧಿಗಳ ಕಾರ್ಯ ಶ್ಲಾಘನೀಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.
ಗೃಹ ರಕ್ಷಕದಳ ವಿಭಾಗದಿಂದ ಕೊಡಗು ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕದಳದ ಸಿಬ್ಬಂಧಿಗಳ ಕರ್ತವ್ಯ ಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಬೇಕಿದೆ. ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಗೃಹ ರಕ್ಷಕರು ಪೊಲೀಸರ ಜೊತೆ ಸೇರಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಠರು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಮಾತನಾಡಿ, ಜಿಲ್ಲೆಗೆ ಗೃಹರಕ್ಷಕರ 500 ಮಂಜೂರಾತಿಯಲ್ಲಿ, 250 ಗೃಹ ರಕ್ಷಕರಿಗೆ ಅವಕಾಶವಿದ್ದು, 150 ಮಂದಿ ಪೊಲೀಸರ ಜತೆ ಸರಿಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಗೃಹ ರಕ್ಷಕರು ಮಳೆ, ಗಾಳಿ, ಚಳಿ ಎನ್ನದೆ ಜಿಲ್ಲೆಯಲ್ಲಿ ಪೊಲೀಸರ ಜೊತೆಗೂಡಿ ಕರ್ತವ್ಯ ನಿರ್ವಹಿಸುತ್ತಾರೆ. ಸಂಚಾರ ನಿಯಂತ್ರಣ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹ ರಕ್ಷಕರು ಪೊಲೀಸರ ಜೊತೆಗೂಡಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಶಿಸ್ತು ಕಾಪಾಡಿಕೊಂಡು ಹೋಗಬೇಕು. ಆಡಳಿತ ವ್ಯವಸ್ಥೆ ತಮ್ಮ ಜೊತೆ ಇರಲಿದ್ದು, ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಸಾರ್ವಜನಿಕರ ಜೊತೆ ಸಂಯಮ ಮತ್ತು ಬದ್ಧತೆಯಿಂದ ನಡೆದುಕೊಳ್ಳಬೇಕು ಎಂದರು.
ಉದ್ಯೋಗದಾತರು ಹೆಚ್ಚಿನ ಸಂಖ್ಯೆಯಲ್ಲಿ ಗೃಹ ರಕ್ಷಕದಳ ವಿಭಾಗಕ್ಕೆ ಸೇರುವಂತಾಗಬೇಕು. ಸರ್ಕಾರ ಮಾನವೀಯ ನೆಲಗಟ್ಟಿನಲ್ಲಿ ಸಾಧ್ಯವಾದಷ್ಟು ಉದ್ಯೋಗ ಕಲ್ಪಿಸಿ, ದುಡಿಮೆಗೆ ತಕ್ಕ ಪ್ರತಿಫಲ ಕಲ್ಪಿಸಲು ಪ್ರಯತ್ನಿಸಿದೆ ಎಂದು ಸುಂದರ್ ರಾಜ್ ವಿವರಿಸಿದರು.
ಗೃಹ ರಕ್ಷಕರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ಸಾಹದಿಂದ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಠರು ಸಲಹೆ ಮಾಡಿದರು.
ಡಿವೈಎಸ್‍ಪಿ ಎಂ.ಜಗದೀಶ್ ಮಾತನಾಡಿ ಪೊಲೀಸರ ಜೊತೆಗೂಡಿ ಗೃಹ ರಕ್ಷಕರು ಕರ್ತವ್ಯ ನಿರ್ವಹಿಸುತ್ತಾರೆ. ಗೃಹ ರಕ್ಷಕರ ಕಾರ್ಯ ಪೊಲೀಸ್ ಇಲಾಖೆಗೆ ಅಮೂಲ್ಯವಾಗಿದೆ ಎಂದರು.
ಜಿಲ್ಲಾ ಕಾರಾಗೃಹ ಇಲಾಖೆಯ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಮಾತನಾಡಿ ಗೃಹ ರಕ್ಷಕರು ಸಮವಸ್ತ್ರದಲ್ಲಿ ಕರ್ತವ್ಯ ನಿರ್ವಹಿಸುವುದು ಒಂದು ರೀತಿ ಹೆಮ್ಮೆ, ಆ ನಿಟ್ಟಿನಲ್ಲಿ ವೃತ್ತಿ ಧರ್ಮವನ್ನು ಗೌರವಿಸಿ ಸಮಾಜಮುಖಿಯಾಗಿ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಮೆಚ್ಚುವಂತಹದ್ದು ಎಂದರು. ಮುಖ್ಯಪೇದೆ ಫಾರುಖ್ ನಿರೂಪಿಸಿದರು, ಗೃಹ ರಕ್ಷಕಿಯರಾದ ಕೆ.ಎಸ್.ಲವಿ ಸ್ವಾಗತಿಸಿದರು, ಲಕ್ಷ್ಮಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.