ಮಡಿಕೇರಿ ಡಿ.17 :NEWS DESK ಕೇರಳ ರಾಜ್ಯದಲ್ಲಿ ಕೊರೋನಾ ರುಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದ ಸಚಿವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೋನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಗಳನ್ನ ಕೈಗೊಳ್ಳಬೇಕು. ಕೊರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*