ಮಡಿಕೇರಿ ಡಿ.18 : ನೆರೆಯ ಕೇರಳ ರಾಜ್ಯದಲ್ಲಿ ಕೊರೋನ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗುತ್ತಿದೆ. ಆದರೆ ಸಧ್ಯಕ್ಕೆ ತೀವ್ರ ನಿರ್ಬಂಧ ಹೇರುವ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಂಗಳವಾರ ಕೊರೋನ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಗಡಿ ಭಾಗವಾದ ಕೊಡಗು, ಮಂಗಳೂರು ಮತ್ತು ಚಾಮರಾಜನಗರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಪ್ರಸಕ್ತ ರಾಜ್ಯದಲ್ಲಿ ಸಹಜ ಸ್ಥಿತಿ ಇದೆ. ಶೀತ, ಜ್ವರ ಕೆಮ್ಮು ಇರುವವರು ಕೊರೋನ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಪ್ರಕರಣ ಬಂದರಷ್ಟೇ ನಿಬರ್ಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರ ಕೈಗೊಳ್ಳಲಿದೆ. 60 ವರ್ಷ ಮೇಲ್ಪಟ್ಟ ಹಾಗೂ ಜ್ವರ, ಕೆಮ್ಮು ಇತರ ಬಾಧಿತ ರೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ರೋಗ ಬಾಧಿತರಿಗೆ ಸಮಸ್ಯೆ ಆಗದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್ ಇರಿಸಲಾಗಿದ್ದು, ಸಕಲ ಸಿದ್ಧತೆಗೆ ಸೂಚನೆ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
::: ಭ್ರೂಣಹತ್ಯೆ ತಡೆ ಕಾರ್ಯಪಡೆ ರಚನೆ :::
ರಾಜ್ಯದ ಕೆಲವು ಕಡೆ ಭ್ರೂಣಹತ್ಯೆ ಪ್ರಕರಣ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಇಂತಹ ಪ್ರಕರಣ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಕಾರ್ಯಪಡೆ ರಚಿಸಲು ಚಿಂತಿಸಲಾಗಿದೆ ಎಂದರು.
::: ಪ್ರತಾಪ್ ಸಿಂಹಗೆ ರಕ್ಷಣೆ :::
ಸಂಸತ್ ಭವನದ ಕುರಿತು ಪ್ರಶ್ನೆಗೆ ಉತ್ತರಿಸಿದ ಸಚಿವರು ಬಿಜೆಪಿ ಸಂಸದರ ಬದಲು ಕಾಂಗ್ರೆಸ್ ಸಂಸದ ಆಗಿದ್ದಲ್ಲಿ ತನಿಖೆಗೆ ಒತ್ತಾಯಿಸಿ ಬಿಜೆಪಿಯವರು ಗ್ರಾಮ, ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕ್ರಮಕೈಗೊಳ್ಳುವ ಬದಲು ಬಿಜೆಪಿ ಮಂದಿ ರಕ್ಷಣೆಗೆ ನಿಂತಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಲೆಹರ್ ಸಿಂಗ್ ಹಾಗೂ ಸಿ.ಟಿ.ರವಿ ಅವರುಗಳು ಹೇಳಿಕೆ ನೀಡುತ್ತಾ ರಾಜಕಾರಣ ಮಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.
ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವ ಬದಲು ವಿಷಯದ ಕುರಿತು ಚರ್ಚೆಯಲ್ಲಿ ತೊಡಗಿದ್ದ 12 ಸಂಸದರನ್ನು ಅಮಾನತು ಮಾಡಿರುವುದು ಹಾಸ್ಯಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*