ಸುಂಟಿಕೊಪ್ಪ ಡಿ.18: ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂಜಾನೆಯಿಂದಲೇ ಗಣಪತಿ ಹೋಮ, ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಅರ್ಚಕರಾದ ಭಾನುಪ್ರಕಾಶ್ ಭಟ್ ಹಾಗೂ ರಮೇಶ್ ಭಟ್ ವಿಶೇಷ ಪೂಜಾ ಕೈಂಕರ್ಯ ನೇರವೇರಿಸಿದರು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭ ದೇವಾಲಯದ ಟ್ರಸ್ಟಿ ಹಾಗೂ ಅಧ್ಯಕ್ಷ ಕೆ.ಎನ್.ಪೂಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಜಿ ಡಾ. ಎ.ಬಿ.ತಮ್ಮಯ್ಯ, ತಕ್ಕ ಮುಖ್ಯಸ್ಥರಾದ ಕುಮಾರ್, ಪ್ರಧಾನ ಟ್ರಸ್ಟಿಗಳಾದ ಕೆ.ಎಸ್.ಮಂಜುನಾಥ್, ಜಗನ್ನಾಥ್ ರೈ, ದತ್ತ ಸೋಮಣ್ಣ, ಎಂ.ಎಸ್.ಸುರೇಶ್ ಚಂಗಪ್ಪ, ಸನ್ನಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು.ಷಷ್ಠಿಯ ಅಂಗವಾಗಿ ದೇವಾಲಯವನ್ನು ತಳಿರು ತೊರಣ ಸೇರಿದಂತೆ ವಿವಿಧ ಬಣ್ಣ ಬಣ್ಣದ ಹೂಗಳಿಂದ ಅಲಂಕಾರಿಸಲಾಗಿತ್ತು.













