ಮಡಿಕೇರಿ ಡಿ.19 : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಜೊತೆ ಪಕ್ಷದ ಚಟುವಟಿಕೆಗಳ ಕುರಿತು ಮಾತುಕತೆ ನಡೆಸಿದರು.
ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.