ಮಡಿಕೇರಿ ಡಿ.19 : ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದ ನಾಗಬನದಲ್ಲಿ ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯ ಷಷ್ಠಿ ಪೂಜೆ ನಡೆಯಿತು.
ನಾಗ ದೇವರಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಕಂರ್ಯಗಳು ಜರುಗಿದವು.
ನಂತರ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಲಾಯಿತು. ಮಹಾಮಂಗಳಾರತಿಯ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂರ್ಪಣೆ ನೆರವೇರಿತು. ಊರಿನವರು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಭಕ್ತರು ಷಷ್ಠಿ ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.ಮುಖ್ಯ ಅರ್ಚಕ ಸುಬ್ರಮಣ್ಯ ಕೇಕುನ್ನಾಯ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳನ್ನು ನಡೆಸಿಕೊಟ್ಟರು.
ಊರು ತಕ್ಕರಾದ ಚಮ್ಮಟೀರ ಕುಟುಂಬಸ್ಥರ ತಕ್ಕಾಮೆಯಲ್ಲಿ ನಡೆದ ಷಷ್ಠಿ ಪೂಜೆಯಲ್ಲಿ ಮೂಕಳೇರ, ಮಚ್ಚಿಯಂಡ, ಚೇಂದಿಮಾಡ, ಕೂಕಂಡ, ಮನೆಯಪಂಡ, ಸಣ್ಣುವಂಡ, ಕೊಳೇರ ಸೇರಿದಂತೆ ಊರಿನ ವಿವಿಧ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು.










