ಮಡಿಕೇರಿ ಡಿ.19 : ಭಾಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ “ಸಂಪ್ರೋಕ್ಷಣೆ” ಧಾರ್ಮಿಕ ವಿಧಿ ವಿಧಾನಗಳು ಶ್ರದ್ಧಾಭಕ್ತಿಯಿಂದ ನೆರವೇರಿತು.
ಗಣಹೋಮ, ಶ್ರೀಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.
ರಾತ್ರಿ ಶ್ರೀ ಭೂತ ಬಲಿ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ಜರುಗಿತು. ಸುಬ್ರಹ್ಮಣ್ಯ ಷಷ್ಠಿಯ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿಯಿಂದ ಮೇ 1 ರವರೆಗೆ ತ್ರಿಕಾಲ ದೇವರ ಉತ್ಸವವು ನಡೆಯಲಿದೆ.