ವಿರಾಜಪೇಟೆ ಡಿ.19 : ಹಾಲುಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಯಿತು.
ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ.ಹರೀಶ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ, ಯಾವುದೇ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ದೃಢಪಡಿಸಿದರು.
ಈ ಸಂದರ್ಭದಲ್ಲಿ ಶಲೆಯ ಮುಖ್ಯೋಪದ್ಯಾಯರಾದ ಭವಾನಿ, ಸಿ ಆರ್.ಪಿ. ಶುಶಾ ಸೇರಿದಂತೆ ಶಾಲಾ ಶಿಕ್ಷಕರು ಹಾಜರಿದ್ದರು.









