ಬೆಂಗಳೂರು, ನವದೆಹಲಿ, ಡಿ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಮಾನ್ಯ ಪ್ರಧಾನ ಮಂತ್ರಿಗಳಿಗೆ ಕೋರಿದರು.
Breaking News
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*